October 8, 2026
Thursday, October 8, 2026
spot_img

WEATHER | ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಅಬ್ಬರ; ಹವಾಮಾನ ಇಲಾಖೆಯಿಂದ ಹೈ ಅಲರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಕ್ಷೀಣಿಸಿದ್ದ ಮುಂಗಾರು ಮಾರುತಗಳು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡಿಗೆ ಹೈ ಅಲರ್ಟ್

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಬಿರುಗಾಳಿಯ ವೇಗ ಹೆಚ್ಚಿರಲಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ ಹಾಗೂ ಸಮುದ್ರ ತೀರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:

ಕರಾವಳಿ ಭಾಗದಲ್ಲಿಬಿಟ್ಟು ಬಿಡದೆ ಭಾರೀ ಮಳೆ, ಕಡಲತೀರದಲ್ಲಿ ಬಿರುಗಾಳಿ ಸಹಿತ ಅಲೆಗಳ ಅಬ್ಬರ ಇರಲಿದೆ. ಇನ್ನು, ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

Must Read