ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆಯಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ರಾತ್ರಿ ಘರ್ಷಣೆ ನಡೆದಿದ್ದು, ಇಂಟರ್‌ನೆಟ್ ಸ್ಥಗಿತವಾಗಿದೆ.
ಸಂಸದ್ ಚಲೋ ಕರೆ ನೀಡಿದ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗ ಮಾಡಿದ್ದಾರೆ.
ಟಾಲ್‌ಸ್ಟಾಯ್ ಮಾರ್ಗ ಮತ್ತು ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಕಲ್ಲು ತೂರಾಟ ನಡೆದಿದೆ. ಈ ಘರ್ಷಣೆಯಲ್ಲಿ ಇಬ್ಬರು ಎಸಿಪಿ ದರ್ಜೆಯ ಅಧಿಕಾರಿಗಳು ಸೇರಿದಂತೆ ಕನಿಷ್ಠ 6 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಲ ಕಿಡಿಗೇಡಿಗಳು ಪೊಲೀಸರ ಮೇಲೆ ದಾಳಿ ನಡೆಸಿ, ಲಾಠಿ ಕಸಿದುಕೊಂಡು ಅವರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ದೆಹಲಿ ಹಾಗೂ ಜಂತರ್ ಮಂತರ್ ಸುತ್ತಮುತ್ತ ಜ್ಯಾಮರ್‌ಗಳನ್ನು ಅಳವಡಿಸಲಾಗಿದೆ. ಇಂಟರ್ನೆಟ್ ಸೇವೆ ಸಂಪೂರ್ಣವಾಗಿ ಬಂದ್ ಆಗಿದೆ.



