ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕುಡಿಯುವ ನೀರು, ಉದ್ಯೋಗ ಮತ್ತು ರೈತರ ನೆರವಿಗೆ ಅಗತ್ಯ ಅನುದಾನ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಬರ ಎದುರಿಸಲು ವಿಶೇಷ ಅನುದಾನ
ಪ್ರತಿ ಶಾಸಕರಿಗೆ ತುರ್ತು ಕಾಮಗಾರಿಗಳಿಗಾಗಿ 1 ಕೋಟಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತಿ ಜಿಲ್ಲೆಗೆ 5 ಕೋಟಿ ಬಿಡುಗಡೆ ಮಾಡಲಾಗಿದೆ. ಜಿಲ್ಲೆಗಳ ಪಿಡಿ ಖಾತೆಗಳಲ್ಲಿ ಈಗಾಗಲೇ 329 ಕೋಟಿ ಲಭ್ಯವಿದ್ದು, ಹಣದ ಕೊರತೆಯಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಜಿಲ್ಲಾವಾರು ಪರಿಶೀಲನೆ ಬಳಿಕ ಮುಂದಿನ ಕ್ರಮ
ಬೆಂಗಳೂರು ಮತ್ತು ಮೈಸೂರು ವಿಭಾಗಗಳಲ್ಲಿ ಶೀಘ್ರದಲ್ಲೇ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ. ಅದರ ವರದಿ ಆಧರಿಸಿ ರೈತರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ನೆರವು ನೀಡುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ:
ರೈತರಿಗೆ ಉದ್ಯೋಗ, ಕೇಂದ್ರಕ್ಕೆ ಮನವಿ
ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೂ ನೆರವಿಗಾಗಿ ಮನವಿ ಸಲ್ಲಿಸಲಾಗಿದ್ದು, ಅಗತ್ಯ ಅನುದಾನ ನಿರೀಕ್ಷಿಸಲಾಗಿದೆ. ಮುಂಗಾರು ಮಳೆ ಕೊರತೆಯಿಂದ ಹಲವು ಕಡೆ ಬಿತ್ತನೆ ಒಣಗಿದ್ದು, ಆಗಸ್ಟ್‌ನಲ್ಲಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ರೈತರು ಇದ್ದಾರೆ ಎಂದು ಸಚಿವರು ಹೇಳಿದರು.
ನೀಟ್ ವಿಚಾರದಲ್ಲೂ ಪ್ರತಿಕ್ರಿಯೆ
ನೀಟ್ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಜವಾಬ್ದಾರರು ಹೊಣೆ ಹೊತ್ತು ಕ್ರಮ ಕೈಗೊಳ್ಳಬೇಕು ಎಂದು ಡಿಸಿಎಂ ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿರುವುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಒತ್ತಾಯಿಸಿದರು.



