July 23, 2026
Thursday, July 23, 2026
spot_img

ಗೋಡೌನ್‌ನಲ್ಲಿ ಬೆಂಕಿ ಅವಘಡ: ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬನ್ನೇರುಘಟ್ಟ ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಿಂದ ಹಾಸಿಗೆ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ

ಕಟ್ಟಡದ ಕೆಳಮಹಡಿಯಲ್ಲಿ ಹಾಸಿಗೆ ಅಂಗಡಿ ಹಾಗೂ ಮೇಲ್ಮಹಡಿಯಲ್ಲಿ ಗೋಡೌನ್ ಕಾರ್ಯನಿರ್ವಹಿಸುತ್ತಿತ್ತು. ಕೆಲಸಗಾರರ ಬಳಕೆಗಾಗಿ ಇಡಲಾಗಿದ್ದ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ

ಬೆಂಕಿ ವ್ಯಾಪಿಸುತ್ತಿದ್ದಂತೆ ಕೆಲಸಗಾರರು ತಕ್ಷಣ ಹೊರಗೆ ಬಂದು ಸುರಕ್ಷಿತವಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದರು.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !