July 24, 2026
Friday, July 24, 2026
spot_img

ಎರಡನೇ ಆಷಾಢ ಶುಕ್ರವಾರ: ಇಂದು ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ಮೈಸೂರಿನ ತಾಯಿ ಚಾಮುಂಡಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.

ಆಷಾಢ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಹರಿದುಬಂದಿದ್ದಾರೆ. ತಾಯಿ ಚಾಮುಂಡಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ ದೇವಸ್ಥಾನವನ್ನು ವಿವಿಧ ಹೂಗಳ ಮಾಲೆಗಳಿಂದ ಅಲಂಕರಿಸಲಾಗಿದೆ. ಬೆಳ್ಳಗೆಯಿಂದಲೆ ಭಕ್ತರು ಸರತಿ ಸಾಲಿನಲ್ಲಿ ನಿಂತು ತಾಯಿಯ ದರುಶನ ಮಾಡುತ್ತಿದ್ದಾರೆ.

ಇನ್ನು ಆಷಾಢ ಮಾಸದ ಮೊದಲ ಶುಕ್ರವಾರದಂದು ತಾಯಿ ಚಾಮುಂಡಿಗೆ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ಈ ಬಾರಿ 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ ದರುಶನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮುಂಜಾನೆ 5:30ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರುಶನಕ್ಕೆ ಅವಕಾಶವಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !