ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸ್ಐಆರ್ ಕರ್ತವ್ಯದಲ್ಲಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಮಂತ ಕುಮಾರಿ (44) ಮೃತ ಶಿಕ್ಷಕಿ. ಇತ್ತೀಚೆಗೆ ಬಿಎಲ್ಒ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಶಮಂತ ಅವರಿಗೆ ಶುಗರ್, ಬಿಪಿ ಹೆಚ್ಚಾಗಿತ್ತು. ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
ಮೇಲಧಿಕಾರಿಗಳು ಎಸ್ಐಆರ್ ಪ್ರಕ್ರಿಯೆ ಬೇಗ ಮುಗಿಸುವಂತೆ ಒತ್ತಡ ಹಾಕುತ್ತಿದ್ದರು. ನನಗೆ ಆರೋಗ್ಯ ಸರಿಯಿಲ್ಲ ಕೆಲಸದಿಂದ ನನ್ನನ್ನು ಬಿಡುಗಡೆ ಮಾಡಿ ಎಂದು ಕೇಳಿಕೊಂಡಿದ್ದರು. ಮೇಲಧಿಕಾರಿಗಳ ಒತ್ತಡದಿಂದ ಸ್ಟ್ರೆಸ್ ಹೆಚ್ಚಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.



