ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಕೇಂದ್ರ ಸರ್ಕಾರ ಈಗಿರುವ ಕಾನೂನನ್ನು ಮತ್ತಷ್ಟು ಕಠಿಣಗೊಳಿಸಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೀಡಿದ ಭರವಸೆಯ ಬೆನ್ನಲ್ಲೇ, ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ಮಾರ್ಗಗಳ ತಡೆ) ಕಾಯ್ದೆ–2024ಕ್ಕೆ ತಿದ್ದುಪಡಿ ತರಲು ಸರ್ಕಾರ ಸಿದ್ಧತೆ ನಡೆಸಿದೆ.
ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಕ್ಕೆ ಒತ್ತು
ಹೊಸ ತಿದ್ದುಪಡಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:
ಶಿಕ್ಷೆ ಮತ್ತಷ್ಟು ಕಠಿಣ
ಪ್ರಸ್ತುತ ಕಾನೂನಿನಡಿ ಅಪರಾಧಿಗಳಿಗೆ 3 ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ. ಸಂಘಟಿತ ಅಕ್ರಮ ಜಾಲಗಳಿಗೆ 5 ರಿಂದ 10 ವರ್ಷ ಜೈಲು ಹಾಗೂ ಕನಿಷ್ಠ 1 ಕೋಟಿ ದಂಡದ ವ್ಯವಸ್ಥೆಯಿದ್ದು, ಇದನ್ನು ಇನ್ನಷ್ಟು ಕಠಿಣಗೊಳಿಸುವ ಪ್ರಸ್ತಾವನೆ ಚರ್ಚೆಯಲ್ಲಿದೆ.
ಸಚಿವ ಸಂಪುಟದ ಮುಂದೆ ಮಸೂದೆ
ತಿದ್ದುಪಡಿ ಕರಡನ್ನು ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಮಂಡಿಸುವ ನಿರೀಕ್ಷೆಯಿದ್ದು, ಬಳಿಕ ಮುಂಗಾರು ಅಧಿವೇಶನದ ಎರಡನೇ ವಾರದಲ್ಲೇ ಸಂಸತ್ತಿನಲ್ಲಿ ಅಂಗೀಕರಿಸಲು ಸರ್ಕಾರ ಪ್ರಯತ್ನ ನಡೆಸಲಿದೆ.



