September 17, 2026
Thursday, September 17, 2026
spot_img

CJP ನಿಯೋಗದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ; ನಾಳೆ ಸರ್ಕಾರದ ನಿರ್ಧಾರ ಪ್ರಕಟ: ಜೆ.ಪಿ. ನಡ್ಡಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಕಾಕ್ರೋಚ್ ಜನತಾ ಪಾರ್ಟಿ (CJP) ನಿಯೋಗದೊಂದಿಗೆ ಕೇಂದ್ರ ಸರ್ಕಾರ ಎರಡನೇ ಸುತ್ತಿನ ಮಾತುಕತೆ ನಡೆಸಿದ್ದು, ನಾಳೆ ಮಧ್ಯಾಹ್ನ ಸರ್ಕಾರದ ಅಂತಿಮ ನಿರ್ಧಾರವನ್ನು ತಿಳಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.

ಎರಡು ಗಂಟೆಗಳ ಸುದೀರ್ಘ ಸಭೆ

ದೆಹಲಿ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸಿಜೆಪಿ ಪ್ರಮುಖ ಪ್ರತಿನಿಧಿಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ನಡೆಯಿತು.

ಇದನ್ನೂ ಓದಿ:

3 ಬೇಡಿಕೆ, 5 ಸುಧಾರಣಾ ಸಲಹೆಗಳು

ಸಭೆಯಲ್ಲಿ ಸಿಜೆಪಿ ನಿಯೋಗವು ಮೂರು ಪ್ರಮುಖ ಬೇಡಿಕೆಗಳ ಜೊತೆಗೆ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ಐದು ಸುಧಾರಣಾ ಸಲಹೆಗಳನ್ನು ಸರ್ಕಾರದ ಮುಂದೆ ಮಂಡಿಸಿದೆ.

ನಾಳೆ ಸರ್ಕಾರದ ಅಧಿಕೃತ ಉತ್ತರ

ನಿಯೋಗದ ಎಲ್ಲಾ ಬೇಡಿಕೆಗಳನ್ನು ಗಮನದಿಂದ ಆಲಿಸಲಾಗಿದ್ದು, ವಿವಿಧ ಆಯಾಮಗಳಲ್ಲಿ ಪರಿಶೀಲಿಸಲಾಗಿದೆ. ಈ ಕುರಿತು ಸರ್ಕಾರದ ನಿರ್ಧಾರವನ್ನು ನಾಳೆ ಮಧ್ಯಾಹ್ನ ಮತ್ತೊಮ್ಮೆ ಸಭೆ ನಡೆಸಿ ಅಧಿಕೃತವಾಗಿ ತಿಳಿಸಲಾಗುವುದು ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !