July 24, 2026
Friday, July 24, 2026
spot_img

NTA ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಪ್ರಶ್ನೆಯೇ ಇಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕ್ರೋಚ್‌ ಜನತಾ ಪಾರ್ಟಿ ನಿಯೋಗದೊಂದಿಗೆ ಚರ್ಚೆ ನಡೆಸಿದ ಸರ್ಕಾರ, ತನ್ನ ಅಂತಿಮ ತೀರ್ಮಾನವನ್ನು ಶನಿವಾರ ಮಧ್ಯಾಹ್ನದೊಳಗೆ ತಿಳಿಸುವುದಾಗಿ ಹೇಳಿದೆ.

ಜವಾಬ್ದಾರಿಯಿಂದ ಹಿಂದೆ ಸರಿಯಲ್ಲ

ಕಷ್ಟದ ಸಮಯದಲ್ಲಿ ರಾಜೀನಾಮೆ ನೀಡುವುದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಸುಲಭ ಮಾರ್ಗವಾಗಿದೆ. ಜನಾದೇಶಕ್ಕೆ ಗೌರವ ನೀಡಿ ಸರ್ಕಾರ ತನ್ನ ಕರ್ತವ್ಯವನ್ನು ಪೂರ್ಣಗೊಳಿಸಲಿದೆ. ಹೀಗಾಗಿ ಶಿಕ್ಷಣ ಸಚಿವರ ರಾಜೀನಾಮೆ ನೀಡುವ ಪ್ರಮೇಯವೇ ಬರುವುದಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

NTA ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಯಲ್ಲಿ ಕಂಡುಬಂದಿರುವ ಲೋಪದೋಷಗಳನ್ನು ಗುರುತಿಸಿ, ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಪರೀಕ್ಷಾ ವಿಧಾನದಲ್ಲಿನ ದೋಷಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಶೀಘ್ರದಲ್ಲೇ ಕಠಿಣ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುತ್ತದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಡುವ ಜಾಲಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಈಗಾಗಲೇ ಹಲವು ಗ್ಯಾಂಗ್‌ಗಳನ್ನು ಬಂಧಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !