ಹೊಸದಿಗಂತ ವರದಿ ದಾಂಡೇಲಿ:
ದಾಂಡೇಲಿ : ಹಳಿಯಾಳ – ದಾಂಡೇಲಿ ರಾಜ್ಯ ಹೆದ್ದಾರಿಯ ತಾಟಗೇರಾ ಕ್ರಾಸ್ ಹತ್ತಿರ ಸವಾರನ ನಿಯಂತ್ರಣ ತಪ್ಪಿ ದ್ಬಿಚಕ್ರ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಂದಾಜು 20 -22 ವಯಸ್ಸಿನ ಪ್ರಸಾದ ರಾಘವೇಂದ್ರ ಹುಲ್ಕುಂದ ಎಂಬವರೇ ಮೃತಪಟ್ಟ ಯುವಕನಾಗಿದ್ದಾರೆ. ಬೈಲಹೊಂಗಲದಿಂದ ಶ್ರೀ ಕ್ಷೇತ್ರ ಉಳವಿ ಹೋಗಲೆಂದು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಸ್ಥಳದಲ್ಲೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಬಿದ್ದ ತಕ್ಷಣವೇ ಇವರನ್ನೂ ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಇವರು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಇದನ್ನೂ ಓದಿ:
ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.



