July 24, 2026
Friday, July 24, 2026
spot_img

ಕರಾವಳಿಯಲ್ಲಿ ಮಳೆ ಅಬ್ಬರ: ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ತುರ್ತು ಕ್ರಮ ಕೈಗೊಳ್ಳಲಾಗಿದೆ.

 ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಎಲ್ಲಾ ಪದವಿ ಪೂರ್ವ (PUC) ಕಾಲೇಜುಗಳು (ವಸತಿ ಕಾಲೇಜುಗಳು ಸೇರಿದಂತೆ) ಜಿಲ್ಲೆಯ ಎಲ್ಲಾ ಡಿಪ್ಲೊಮಾ, ಐಟಿಐ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ:

ಇನ್ನು, ಪದವಿ, ಸ್ನಾತಕೋತ್ತರ ಪದವಿ (PG), ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಎಲ್ಲಾ ರೀತಿಯ ವೃತ್ತಿಪರ ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಲಾಗಿದೆ.

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನದಿ, ತೋಡು, ಜಲಪಾತ, ಹಳ್ಳ-ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಜಿಲ್ಲಾಡಳಿತದ ಕಟ್ಟುನಿಟ್ಟಾಗಿ ಎಚ್ಚರಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !