ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು 2 ದಿನ ED ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುವ ಸಲುವಾಗಿ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ED ಕಸ್ಟಡಿಗೆ ಕೇಳಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್, ಸತೀಶ್ ಸೈಲ್ ಅವರನ್ನು 2 ದಿನ ED ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ. ಸೆ.12ರಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲು ಸೂಚಿಸಲಾಗಿದೆ