July 25, 2026
Saturday, July 25, 2026
spot_img

ನೀಟ್ ಅಕ್ರಮ ಹೋರಾಟಕ್ಕೆ ದೊರೆತ ಜಯ: ಆಸ್ಪತ್ರೆ ಬೆಡ್‌ನಿಂದಲೇ ವಿಕ್ಟರಿ ಸಿಂಬಲ್ ತೋರಿದ ವಾಂಗ್ಚುಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಇದಕ್ಕೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಧನಾತ್ಮಕವಾಗಿ ಸ್ಪಂದಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯ ಫಲವಾಗಿ ಲಭಿಸಿದ ರಾಜೀನಾಮೆಯನ್ನು ಅವರು ‘ಪ್ರಜಾಪ್ರಭುತ್ವದ ನಿಜವಾದ ವಿಜಯ’ ಎಂದು ಬಣ್ಣಿಸಿದ್ದಾರೆ.

26 ದಿನಗಳ ಸತ್ಯಾಗ್ರಹ ಮತ್ತು ಸರ್ಕಾರದ ಅಭಯ

ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ಮತ್ತು ಹೊಣೆಗಾರಿಕೆಯನ್ನು ಒತ್ತಾಯಿಸಿ ಜೂನ್ 28 ರಿಂದ ಆರಂಭಗೊಂಡಿದ್ದ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ವಾಂಗ್ಚುಕ್ ಕೊನೆಗೊಳಿಸಿದರು. ನೀಟ್ ವಿಚಾರವನ್ನು ಸಂಸತ್ತಿನಲ್ಲಿ ಚರ್ಚಿಸುವುದು, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದು ಹಾಗೂ ಅಕ್ರಮದಿಂದ ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಅಭಯ ನೀಡಿದ ಬಳಿಕ ಸತ್ಯಾಗ್ರಹವನ್ನು ಹಿಂಪಡೆಯಲಾಯಿತು.

ಆಸ್ಪತ್ರೆಯಿಂದಲೇ ವಿಕ್ಟರಿ ಸಂದೇಶ ಹಂಚಿಕೊಂಡ ವಾಂಗ್ಚುಕ್

ಉಪವಾಸ ಸತ್ಯಾಗ್ರಹದಿಂದಾಗಿ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಮ್ ವಾಂಗ್ಚುಕ್, ಎಕ್ಸ್ (ಟ್ವಿಟರ್) ಖಾತೆಯಲ್ಲಿ ವಿಕ್ಟರಿ ಚಿಹ್ನೆ ತೋರಿಸುವ ಫೋಟೋ ಹಂಚಿಕೊಂಡಿದ್ದಾರೆ. ದೇಶದ ಯುವಜನರು ಮತ್ತು ವಿದ್ಯಾರ್ಥಿಗಳ ಒಗ್ಗಟ್ಟಿನ ಹೋರಾಟವೇ ಈ ಐತಿಹಾಸಿಕ ಬದಲಾವಣೆಗೆ ಮೂಲ ಕಾರಣ ಎಂದು ಅವರು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !