July 25, 2026
Saturday, July 25, 2026
spot_img

ಪ್ರಜಾಪ್ರಭುತ್ವದ ಅಸಲಿ ಗೆಲುವು: ಸಚಿವರ ರಾಜೀನಾಮೆ ಸ್ವಾಗತಿಸಿದ ಅರವಿಂದ್ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮುಕ್ತವಾಗಿ ಸ್ವಾಗತಿಸಿದ್ದಾರೆ. ಈ ಕುರಿತು ‘ಎಕ್ಸ್’ ವೇದಿಕೆಯಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿರುವ ಅವರು, “ಇದು ದೇಶದ ನವಪೀಳಿಗೆ ಹಾಗೂ ‘ಜೆನ್-ಝಿ’ ಯುವಜನತೆಯ ಸುದೀರ್ಘ ಹೋರಾಟಕ್ಕೆ ಸಿಕ್ಕ ಜಯ,” ಎಂದು ಬಣ್ಣಿಸಿದ್ದಾರೆ. ಜನಶಕ್ತಿಯ ಮುಂದೆ ಆಡಳಿತಾರೂಢ ಸರ್ಕಾರ ಕೊನೆಗೂ ತಲೆಬಾಗಬೇಕಾಯಿತು ಎಂದಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿ ತುರ್ತು ಸುಧಾರಣೆ ಅಗತ್ಯ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನಂಬಿಕೆ ಪುನರ್‌ಸ್ಥಾಪನೆಯಾಗಿದೆ ಎಂದು ಅಭಿಪ್ರಾಯಪಟ್ಟ ಕೇಜ್ರಿವಾಲ್, ಕೇವಲ ರಾಜೀನಾಮೆಯಿಂದ ಸಮಸ್ಯೆ ಬಗೆಹರಿಯುವುದಿಲ್ಲ ಎಂದಿದ್ದಾರೆ. ಪರೀಕ್ಷಾ ಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪಗಳನ್ನು ತಡೆಯಲು ‘ನೀಟ್’ (NEET) ವ್ಯವಸ್ಥೆಯಲ್ಲಿ ಸಮಗ್ರ ಹಾಗೂ ಮೂಲಭೂತ ಬದಲಾವಣೆಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಿಕ್ಕ ಮರುಜೀವ

ದೇಶದಲ್ಲಿ ಸತತವಾಗಿ ನಡೆಯುತ್ತಿದ್ದ ಪರೀಕ್ಷಾ ಅಕ್ರಮಗಳಿಂದಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಸರ್ಕಾರದ ಮೇಲಿನ ನಂಬಿಕೆಯನ್ನೇ ಕಳೆದುಕೊಂಡಿದ್ದರು. ಆದರೆ ಯುವಕರ ರೊಚ್ಚಿಗೆದ್ದ ಹೋರಾಟವು ಪ್ರಜಾಪ್ರಭುತ್ವದ ಶಕ್ತಿಯನ್ನು ಸಾಬೀತುಪಡಿಸಿದೆ. ಇನ್ಮುಂದೆಯಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಪಾರದರ್ಶಕ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಲಿದೆ ಎಂದು ಕೇಜ್ರಿವಾಲ್ ಆಶಯ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !