July 25, 2026
Saturday, July 25, 2026
spot_img

ಕೇಂದ್ರ ಸಂಪುಟ ಪುನಾರಚನೆ ಸುಳಿವು? ದೆಹಲಿ ರಾಜಕೀಯ ಅಂಗಳದಲ್ಲಿ ಫಡ್ನವೀಸ್ ಹೆಸರು ಸದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ರಾಜಕಾರಣದಲ್ಲಿ ದಿಢೀರ್ ವಿದ್ಯಮಾನವೊಂದು ಸಂಭವಿಸಿದ್ದು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತಾಗಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಈ ಹಠಾತ್ ಬೆಳವಣಿಗೆಯಿಂದಾಗಿ ದೆಹಲಿಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮನೆಮಾಡಿದೆ.

ನೀಟ್ ಹಗರಣ: ಧರ್ಮೇಂದ್ರ ಪ್ರಧಾನ್ ನಿರ್ಗಮನ

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರವ್ಯಾಪಿ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ಹೊರಬಿದ್ದಿದೆ.

ಶಿಕ್ಷಣ ಖಾತೆಗೆ ಆರ್‌ಎಸ್‌ಎಸ್ ಹಿನ್ನೆಲೆಯ ನಾಯಕ?

ಬಿಜೆಪಿಯಲ್ಲಿ ಶಿಕ್ಷಣ ಮತ್ತು ಪ್ರಮುಖ ಖಾತೆಗಳಿಗೆ ಆರ್‌ಎಸ್‌ಎಸ್ (RSS) ಹಿನ್ನೆಲೆಯ ನಾಯಕರನ್ನೇ ಆಯ್ಕೆ ಮಾಡುವ ಸುದೀರ್ಘ ಪರಂಪರೆಯಿದೆ. ಈ ಹಿನ್ನೆಲೆಯಲ್ಲಿ, ಸಂಘ ಪರಿವಾರದ ಬಲವಾದ ಹಿನ್ನೆಲೆಯಿರುವ ದೇವೇಂದ್ರ ಫಡ್ನವೀಸ್ ಅವರಿಗೆ ಕೇಂದ್ರ ಶಿಕ್ಷಣ ಖಾತೆಯ ಜವಾಬ್ದಾರಿ ನೀಡಲು ಹೈಕಮಾಂಡ್ ಪ್ಲಾನ್ ಮಾಡುತ್ತಿದೆ ಎನ್ನಲಾಗಿದೆ.

ಶಿವಸೇನೆ ನಾಯಕ ಸಂಜಯ್ ರಾವತ್ ಪ್ರಕ್ರಿಯೆ

ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ ಸಂಸದ ಸಂಜಯ್ ರಾವತ್, “ಧರ್ಮೇಂದ್ರ ಪ್ರಧಾನ್ ರಾಜೀನಾಮೆಯಿಂದ ತೆರವಾಗಿರುವ ಶಿಕ್ಷಣ ಸಚಿವ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಅವರನ್ನು ನೇಮಕ ಮಾಡುವ ಎಲ್ಲಾ ಸಾಧ್ಯತೆಗಳಿವೆ” ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !