September 15, 2026
Tuesday, September 15, 2026
spot_img

ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ: ಪ್ರತಿಭಟನೆ ಹಿಂಪಡೆಯುತ್ತಾ CJP?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಪ್ರಕ್ರಿಯೆಯ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಹೋರಾಟ ತೀವ್ರಗೊಂಡಿದೆ. ಈ ಬಿಕ್ಕಟ್ಟನ್ನು ಶಮನಗೊಳಿಸಲು ನವದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸರ್ಕಾರ ಮತ್ತು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಯಕರ ನಡುವೆ ಮೂರನೇ ಸುತ್ತಿನ ಉನ್ನತ ಮಟ್ಟದ ಮಾತುಕತೆ ಆರಂಭವಾಗಿದೆ.

ವಿದ್ಯಾರ್ಥಿಗಳ ಹಿತರಕ್ಷಣೆಗಾಗಿ ಸಚಿವರ ಭೇಟಿ

ಸಭೆಯಲ್ಲಿ ಕೇಂದ್ರ ಸರ್ಕಾರದ ನಿಯೋಗವನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಪ್ರತಿನಿಧಿಸುತ್ತಿದ್ದಾರೆ. ಇತ್ತ ಆಂದೋಲನದ ಮುಂಚೂಣಿಯಲ್ಲಿರುವ ಸಿಜೆಪಿ ಪರವಾಗಿ ರಾಷ್ಟ್ರೀಯ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಭಾಗವಹಿಸಿದ್ದು, ಪರೀಕ್ಷಾ ಸುಧಾರಣೆಗಳು ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

ಹೋರಾಟ ಮುಂದುವರಿಯುವುದೇ?

ಈಗಾಗಲೇ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಈ ನಿರ್ಣಾಯಕ ಸಭೆಯ ಫಲಿತಾಂಶದ ಆಧಾರದ ಮೇಲೆ ಪ್ರತಿಭಟನೆಯನ್ನು ಹಿಂಪಡೆಯಬೇಕೇ ಅಥವಾ ಮುಂದುವರಿಸಬೇಕೇ ಎಂಬುದನ್ನು ಸಿಜೆಪಿ ನಿರ್ಧರಿಸಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !