October 6, 2026
Tuesday, October 6, 2026
spot_img

ಮುಂದಿನ 7 ದಿನ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಲಿದ್ಯಂತೆ: ಹಲವು ಜಿಲ್ಲೆಗಳಿಗೆ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಹಲವೆಡೆ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ವಿಶೇಷವಾಗಿ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಮತ್ತು ಮಲೆನಾಡಿನಲ್ಲಿ ಹೆಚ್ಚು ಮಳೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ.

ಇದನ್ನೂ ಓದಿ:

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೂ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯಲ್ಲಿ ಮಾತ್ರ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಎಚ್ಚರಿಕೆ ಅಗತ್ಯವಾಗಿದೆ.

Must Read