ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರು ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ತಲೆದೂರಿರುವ ತೀವ್ರ ಬರ ಪರಿಸ್ಥಿತಿ ಹಿನ್ನೆಲೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಹಿರಿಯೂರು ತಾಲೂಕು ವ್ಯಾಪ್ತಿಯ ಯರಬಳ್ಳಿ, ತಾಳವಟ್ಟಿ, ವದ್ದಿಕೆರೆ ಗ್ರಾಮಗಳಲ್ಲಿನ ರೈತರ ಜಮೀನುಗಳಿಗೆ ಖುದ್ದಾಗಿ ತೆರಳಿ, ಬರ ಪರಿಸ್ಥಿತಿಯಿಂದ ಒಣಗಿರುವ ಬೆಳೆ ಹಾಗೂ ರೈತರ ಸಮಸ್ಯೆ ಆಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಈಶ್ವರಖಂಡ್ರೆ, ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.



