July 25, 2026
Saturday, July 25, 2026
spot_img

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ‘ಇದು ಯುವಶಕ್ತಿಯ ವಿಜಯ’ ಎಂದ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ವಿದ್ಯಾರ್ಥಿಗಳು ಮತ್ತು ಯುವಜನರ ಶಾಂತಿಯುತ ಹೋರಾಟಕ್ಕೆ ದೊರೆತ ಜಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದ ಯುವಜನರನ್ನು ಅವರು ಅಭಿನಂದಿಸಿದ್ದಾರೆ.

ಕಾಂಗ್ರೆಸ್ ಪಾತ್ರವನ್ನು ಶ್ಲಾಘನೆ

ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ವಿರುದ್ಧ ನಡೆದ ಹೋರಾಟದಲ್ಲಿ ಕಾಂಗ್ರೆಸ್ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಹೋರಾಟಕ್ಕೆ ನಾಯಕತ್ವ ನೀಡಿದ ರಾಹುಲ್ ಗಾಂಧಿ ಅವರ ಪಾತ್ರವನ್ನೂ ಅವರು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ:

ಶಿಕ್ಷಣ ವ್ಯವಸ್ಥೆ ಕುರಿತು ಕಳವಳ

ಒಬ್ಬ ಸಚಿವರ ರಾಜೀನಾಮೆಯಿಂದ ಮಾತ್ರ ಶಿಕ್ಷಣ ಕ್ಷೇತ್ರದ ಎಲ್ಲಾ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ಅಗತ್ಯವಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೋರಾಟ ಮುಂದುವರಿಸುವಂತೆ ಕರೆ

ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಹೋರಾಟ ಮುಂದುವರಿಯಬೇಕು. ವಿದ್ಯಾರ್ಥಿ-ಯುವಜನರ ಹಿತಾಸಕ್ತಿಗೆ ಕಾಂಗ್ರೆಸ್ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !