ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನೂತನ ನಿರ್ದೇಶಕರಾಗಿ ಡಾ.ಬಿ.ದಿನೇಶ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಇಂದು ಡಾ. ಬಿ.ದಿನೇಶ್ ಅವರು ನಿರ್ದೇಶಕರಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡರು. ನೂತನ ನಿರ್ದೇಶಕರನ್ನು ಜಯದೇವ ಆಸ್ಪತ್ರೆಯ ಹಿಂದಿನ ನಿರ್ದೇಶಕ ಡಾ. ಕೆ.ಎಸ್ ರವೀಂದ್ರನಾಥ್ ಹಾಗೂ ಸಿಬ್ಬಂದಿ ಸ್ವಾಗತಿಸಿದರು. ಡಾ. ಬಿ.ದಿನೇಶ್ ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.