July 26, 2026
Sunday, July 26, 2026
spot_img

ಕಾರು- ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ದುರ್ಮ*ರಣ

ಹೊಸದಿಗಂತ ವರದಿ ಮಡಿಕೇರಿ

ಮಡಿಕೇರಿ: ಟ್ಯಾಂಕರ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾದ ಘಟನೆ ಗೋಣಿಕೊಪ್ಪ ಸಮೀಪದ ದೇವರಪುರದಲ್ಲಿ ಇಂದು ಭಾನುವಾರ ಮುಂಜಾನೆ ನಡೆದಿದೆ.

ದೇವರಪುರದ ಆಶ್ರಮದ ಕಮಾನಿನ ಬಳಿ ಬೆಳಗ್ಗೆ 6.30ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ಮಂಗಳೂರು ನೋಂದಣಿಯ ಕಾರು ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮವಾಗಿ ಕಾರಿನ ಮುಂಭಾಗದ ಆಸನಗಳಲ್ಲಿ ಕುಳಿತಿದ್ದ ಸುಮಾರು 24-26 ವರ್ಷ ವಯೋಮಿತಿಯ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಇತರ ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ:

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಟ್ಯಾಂಕರ್ ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !