ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಆನೇಕಲ್ ತಾಲೂಕಿನ ಹಳೆ ಚಂದಾಪುರ ಸಮೀಪದ ಪಾರ್ಕಿಂಗ್ ಲಾಟ್ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್ಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮೊದಲು ಒಂದು ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಪಕ್ಕದಲ್ಲಿದ್ದ ಇತರ ಬಸ್ಗಳಿಗೂ ವ್ಯಾಪಿಸಿ, ನಾಲ್ಕೂ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ. ಬಸ್ಗಳ ಮಾಲೀಕರ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



