ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆದ ನೀಟ್ ಪ್ರತಿಭಟನೆಯ ವೇಳೆ ವಿವಾದಾತ್ಮಕ ಪೋಸ್ಟರ್ ಪ್ರದರ್ಶಿಸಿದ ಯುವತಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.
ವಿವಾದಕ್ಕೆ ಕಾರಣವಾದ ಪೋಸ್ಟರ್
ಪ್ರತಿಭಟನೆ ವೇಳೆ ಯುವತಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಪರ ಪೋಸ್ಟರ್ ಪ್ರದರ್ಶಿಸಿದ್ದಳು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ:
ಪೊಲೀಸರ ತ್ವರಿತ ಕ್ರಮ
ಪರಿಸ್ಥಿತಿ ವಿಕೋಪಕ್ಕೆ ತಿರುಗದಂತೆ ಪೊಲೀಸರು ಕೂಡಲೇ ಪೋಸ್ಟರ್‌ಗಳನ್ನು ವಶಪಡಿಸಿಕೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ವಿದ್ಯಾರ್ಥಿಗಳಿಂದಲೂ ಆಕ್ಷೇಪ
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಇತರ ವಿದ್ಯಾರ್ಥಿಗಳು ಈ ರೀತಿಯ ಪೋಸ್ಟರ್‌ಗಳು ಹೋರಾಟದ ಉದ್ದೇಶವನ್ನು ಮರೆಮಾಚುತ್ತವೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಯುವತಿ ಸ್ಥಳದಿಂದ ತೆರಳಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.



