ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಡುಹಂದಿ ಬೇಟೆಗೆ ಇರಿಸಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕರಿಯಪ್ಪ (52) ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ ವ್ಯಕ್ತಿ. ಈ ಸಂಬಂಧ ಚಂದ್ರಪ್ಪ, ಕೆಂಚಪ್ಪ ಹಾಗೂ ಯದುಕುಮಾರ ಎಂಬ ಮೂವರು ಆರೋಪಿಗಳನ್ನು ಯಗಟಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಾಡುಹಂದಿ ಬೇಟೆಗೆ ಜಮೀನಿನಲ್ಲಿ ವಿದ್ಯುತ್ ತಂತಿ ಅಳವಡಿಸಿದ್ದರು. ಆ ಸ್ಥಳಕ್ಕೆ ಹೋಗಿದ್ದ ಕರಿಯಪ್ಪ ವಿದ್ಯುತ್ ಶಾಕ್‌ಗೆ ಬಲಿಯಾಗಿದ್ದರು. ಈ ವಿಚಾರ ಯಾರಿಗೂ ಗೊತ್ತಾಗದಂತೆ ಆರೋಪಿಗಳು ಶವವನ್ನು ಜಮೀನಿನಲ್ಲಿ ಹೂತು ಹಾಕಿದ್ದರು.
ಕರಿಯಪ್ಪ ಮನೆಯಿಂದ ತೆರಳಿದ್ದವರು ವಾಪಸ್ ಆಗದೇ ಇದ್ದಾಗ ಕುಟುಂಬಸ್ಥರು ಗ್ರಾಮದಲ್ಲಿ ಹುಡುಕಾಟ ನಡೆಸಿದ್ದರು. ಅವರು ಪತ್ತೆಯಾಗದೇ ಇದ್ದಾಗ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದರು.
ಕಾಡುಹಂದಿ ಬೇಟೆಗೆ ಇರಿಸಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾ*ವು : ಮೂವರು ಅರೆಸ್ಟ್
ಸಾಂದರ್ಭಿಕ ಚಿತ್ರ



