July 27, 2026
Monday, July 27, 2026
spot_img

ಜೀವಜಲಕ್ಕಾಗಿ ಹಣಕಾಸಿನ ಕೊರೆತ ಇಲ್ಲ, ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ : ಖಂಡ್ರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕುಡಿಯುವ ನೀರಿಗಾಗಿ ಹಣಕಾಸಿನ ಕೊರತೆ ಇಲ್ಲ, ಇದಕ್ಕೆಂದು 224 ಕೋಟಿ ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಸಿಎಂ ಅಧ್ಯಕ್ಷತೆಯಲ್ಲಿ, ವಿಭಾಗೀಯ ಮಟ್ಟದ ಪ್ರಕೃತಿ ವಿಕೋಪದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಈ ಹಿಂದೆ ಕುಡಿಯುವ ನೀರಿಗಾಗಿ 117 ಕೋಟಿ ರೂ. ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಈ ಬಾರಿ 224 ಕ್ಷೇತ್ರಕ್ಕೆ 224 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ನೀರಿಗಾಗಿ ನಮ್ಮಲ್ಲಿ ಹಣಕಾಸು ಕೊರತೆ ಇಲ್ಲ ಎಂದು ಹೇಳಿದ್ದಾರೆ.

ಈಗಾಗಲೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕುಡಿಯುವ ನೀರು ಬೇಸಿಕ್‌. ಇದಕ್ಕೆ ಸಮಸ್ಯೆ ಆಗುವಂತಿಲ್ಲ. ನೀರು ಸಿಗದಿದ್ರೆ ಖಾಸಗಿ ಕೊಳವೆ, ಬಾವಿ ಮೂಲಕ ನೀರು ಕೊಡಬೇಕು. ಸಿಗದಿದ್ರೆ ಹೊಸದಾಗಿ ಬೋರ್ ಕೊರೆಸಿ ನೀರು ಕೊಡಬೇಕು. ರೈತರ ಹೊಲ, ಗದ್ದೆಗಳಿಗೆ ಭೇಟಿ ನೀಡಿದ್ದೆವು. ಅನೇಕ ಬೆಳೆ ಹಾಳಾಗಿದ್ದು, ನೀರಿನ ಸಮಸ್ಯೆ ಇರೋದು ಕಂಡುಬಂದಿದೆ. ಹೀಗಾಗಿ ಮೊದಲು ಬರದ ಬಗ್ಗೆ ಆದ್ಯತೆ ಕೊಡಲಾಗಿದೆ. ಯಾರೂ ಆತ್ಮಸ್ಥೈರ್ಯ ಕಳೆದುಕೊಳ್ಳದಂತೆ ಧೈರ್ಯ ಕೊಡ್ತಿದ್ದೇವೆ. ಹೆಚ್ಚು ಅನುದಾನ ಕೊಟ್ಟಿದ್ದೇವೆ. ಅಲ್ಲದೇ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗ್ತಿದ್ದೇನೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !