October 15, 2026
Thursday, October 15, 2026
spot_img

ಸಿ.ಟಿ ರವಿ ಸೇರಿ ಬಿಜೆಪಿಗರ ಎದೆ ಸೀಳಿದರೆ ನಾಲ್ಕ್ ಅಕ್ಷರ ಸಿಗಲ್ಲ: ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೀಟ್‌ ಹೋರಾಟಕ್ಕೆ ಸಂಬಂಧವೇ ಇಲ್ಲದಂತಹ ವಿಡಿಯೋವೊಂದನ್ನು ಹಂಚಿಕೊಂಡು ಸಮುದಾಯದ ಮೇಲೆ ದ್ವೇಷ ಸಾರು ಹೇಳಿಕೆಗಳನ್ನು ನೀಡ್ತಿದ್ದಾರೆ. ಸಿ.ಟಿ. ರವಿ ಸೇರಿ ಬಿಜೆಪಿಗರ ಎದೆ ಸೀಳಿದರೆ ನಾಲ್ಕು ಅಕ್ಷರ ಕೂಡ ಇಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತಮ್ಮದೇ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳೋಕೆ ಸುಳ್ಳಿನ ಮೇಲೆ ಸುಳ್ಳು ಹೇಳ್ತಿದ್ದಾರೆ. ಸಿಟಿ ರವಿ ರಾಜಕೀಯ ವ್ಯವಸ್ಥೆಗೆ ಅಂಟಿರುವ ಕಂಟಕ. ಕಳೆದ 3 ವರ್ಷಗಳಲ್ಲಿ ಯಾವುದೇ ಒಂದು ದೊಡ್ಡ ಮಟ್ಟದ ಕೋಮು ಕಲಹ ಸೃಷ್ಟಿಸಲು ಸಾಧ್ಯವಾಗದ ಕಾರಣ ಬಿಜೆಪಿಯವರು ಅಸಹನೀಯರಾಗಿ ವರ್ತಿಸುತ್ತಿದ್ದಾರೆ. ಯಾವುದೇ ವಿಷಯವಿರಲಿ, ಅದಕ್ಕೆ ಪಾಕಿಸ್ತಾನ ಮತ್ತು ಹಿಂದೂ – ಮುಸ್ಲಿಂ ವಿಷಯವನ್ನು ಜೋಡಿಸುವುದು ದ್ವೇಷಸಂಜಾತ ಬಿಜೆಪಿಯ ಹುಟ್ಟುಗುಣ, ಬಿಜೆಪಿಯವರ ಅಸ್ತಿತ್ವ ಇರುವುದೇ ಸಮಾಜ ವಿಭಜನೆಯಲ್ಲಿ ಎನ್ನುವುದನ್ನು ಪದೇ ಪದೇ ಹೇಳಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಟಿ ರವಿ ಅವರೇ, ಸತ್ಯ ಹೇಳಲು ಹಿಂಜರಿಕೆ ಬೇಕಿಲ್ಲ, ಆದರೆ ಸುಳ್ಳು ಹೇಳಲು ಹಿಂಜರಿಕೆ, ನೈತಿಕ ಭಯ, ಸಾಮಾಜಿಕ ಭಯ ಇರಬೇಕಾಗುತ್ತದೆ, ಅಂತಹದ್ದು ಯಾವುದೂ ತಮಗೆ ಇಲ್ಲ ಎನ್ನುವುದನ್ನು ನಿರೂಪಿಸುತ್ತಲೇ ಇದ್ದೀರಿ. ಈ ಹಿಂದೆ ಸದನದಲ್ಲಿ ತಾವು ಆಡಿದ ಮಾತಿನಿಂದಲೇ ನಿಮ್ಮ ಗುಣ ಏನೆಂದು ರಾಜ್ಯಕ್ಕೆ ತಿಳಿದಿದೆ, ಅಂದು ತಾವು ಆಡಿದ್ದ ಮಾತಿನ ತನಿಖೆಗೆ ಇಂದಿಗೂ ಧ್ವನಿ ಸ್ಯಾಂಪಲ್ ಕೊಡದಿರುವುದು ತಮ್ಮ ಪಲಾಯನವಾದ ಮತ್ತು ಅನೈತಿಕತೆಯನ್ನು ತೋರಿಸುತ್ತದೆ. ಕಾನೂನಿಗೆ ಸವಾಲು ಹಾಕುತ್ತೇನೆ ಎಂಬ ನಿಮ್ಮ ದ್ರಾಷ್ಟ್ಯ ನಡೆಯುವುದಿಲ್ಲ, ಉಪ್ಪು ತಿಂದಿದ್ದೀರಿ, ನೀರು ಕುಡಿಯಲು ತಯಾರಾಗಿರಿ ಎಂದು ಟ್ವೀಟ್‌ ಮಾಡಿದ್ದಾರೆ.

Must Read