ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇಕೆದಾಟು ಯೋಜನೆ ಕುರಿತು ಕರ್ನಾಟಕಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಯೋಜನೆ ಜಾರಿಗೊಳಿಸಲು ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಸಮ್ಮತಿ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದೆ.
ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖವಿಲ್ಲ
2018ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಾಮಗಾರಿ ಕೈಗೊಳ್ಳಲು ಕೆಳಹರಿವು ರಾಜ್ಯಗಳ ಅನುಮತಿ ಪಡೆಯಬೇಕು ಎಂಬ ಯಾವುದೇ ಉಲ್ಲೇಖವಿಲ್ಲ ಎಂದು ಕೇಂದ್ರ ತಿಳಿಸಿದೆ.
ಇದನ್ನೂ ಓದಿ:
ರಾಜ್ಯಸಭೆಯಲ್ಲಿ ಪ್ರಶ್ನೆ
ತಮಿಳುನಾಡು ಸಂಸದ ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕೇಂದ್ರ, 2007ರ ಕಾವೇರಿ ನ್ಯಾಯಾಧಿಕರಣದ ಆದೇಶದ ಪ್ರಕಾರ ರಾಜ್ಯಗಳಿಗೆ ತಮ್ಮ ಗಡಿ ವ್ಯಾಪ್ತಿಯಲ್ಲಿ ನೀರಿನ ಬಳಕೆ ನಿಯಂತ್ರಿಸುವ ಹಕ್ಕು ಇದೆ ಎಂದು ವಿವರಿಸಿದೆ.
ಡಿಪಿಆರ್ ಪರಿಷ್ಕರಿಸಲು ಸೂಚನೆ
ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಕೆದಾಟು ಯೋಜನೆಯ ಸಮಗ್ರ ಯೋಜನಾ ವರದಿಯನ್ನು (DPR) ಕೇಂದ್ರ ಜಲ ಆಯೋಗ ಹಿಂದಿರುಗಿಸಿದ್ದು, ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರಿಷ್ಕೃತ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.



