ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಜುಲೈ 30ರವರೆಗೂ ಮಳೆಯ ಅಬ್ಬರ ಮುಂದುವರಿಯುವ ನಿರೀಕ್ಷೆಯಿದೆ.
ಇದನ್ನೂ ಓದಿ:
ಹಲವು ಜಿಲ್ಲೆಗಳಲ್ಲಿ ಮಳೆ, ಬಿರುಗಾಳಿ ಸಾಧ್ಯತೆ
ದಕ್ಷಿಣ ಕನ್ನಡದಲ್ಲಿ ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.



