September 15, 2026
Tuesday, September 15, 2026
spot_img

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: 1,750 ಕೆಜಿ ಅಕ್ಕಿ ಸಮೇತ ಆರೋಪಿ ವಶಕ್ಕೆ

ಹೊಸದಿಗಂತ ವರದಿ ಉತ್ತರಕನ್ನಡ:

ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಶಿರಸಿ ತಹಸೀಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಅಧಿಕಾರಿಗಳು ಓರ್ವನ ಮೇಲೆ ಪ್ರಕರಣ ದಾಖಲಿಸಿದ ಘಟನೆ ಭಾನುವಾರ ರಾತ್ರಿ ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಚೀನ ನಾಗರಾಜ ಗೌಡ ಎಂಬ ಆರೋಪಿಯು 1750ಕೆ.ಜಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಯಾವುದೇ ಪರವಾನಿಗೆ ಇಲ್ಲದೆ ತನ್ನ ವಾಹನದಲ್ಲಿ ಸಾಗಾಟ ಮಾಡುತ್ತಿದ್ದನು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ನಿರೀಕ್ಷಕ ಅಧಿಕಾರಿಗಳು ಹಾಗೂ ಬನವಾಸಿ ಪೊಲೀಸರು ಇಲ್ಲಿನ ದಾಸನಕೊಪ್ಪ ಕ್ರಾಸ್ ಬಳಿ ಆರೋಪಿಯನ್ನು ವಾಹನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !