ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಮಾರಾಟ ಕೇಸ್ಗೆ ಸಂಬಂಧಿಸಿದಂತೆ ನಗರದ ಎರಡು ಕಡೆ ಇಡಿ ಅಧಿಕಾರಿಗಳು ಜಾರಿ ನಿದೇಶನಾಲಯ ದಾಳಿ ನಡೆಸಿದ್ದಾರೆ.
ಹೈದರಾಬಾದ್ ಎನ್ಡಿಪಿಎಸ್ ಕೇಸ್ನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೈದರಾಬಾದ್ನಲ್ಲಿ 7 ಕಡೆ ದಾಳಿ ನಡೆಸಲಾಗಿದೆ. ಇತ್ತೀಚೆಗೆ ಹೈದರಾಬಾದ್ ಪೊಲೀಸರು ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದರು.
ಇತ್ತೀಚೆಗೆ ಥೈಲ್ಯಾಂಡ್ನಿಂದ ಹೈದರಾಬಾದ್ ವಿಮಾನ ನಿಲ್ದಾಣದ ಮೂಲಕ ವ್ಯಾಕ್ಯೂಮ್-ಸೀಲ್ಡ್ ಪ್ಯಾಕೇಜ್ಗಳಲ್ಲಿ ಭಾರತಕ್ಕೆ ಅಕ್ರಮವಾಗಿ 1,500 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.
ಈ ಮಾದಕವಸ್ತು ಜಾಲದ ಮೂಲಕ ಗಳಿಸಲಾದ ಕೋಟ್ಯಂತರ ರೂ. ಅಕ್ರಮ ಹಣದ ವರ್ಗಾವಣೆಯ ಲಿಂಕ್ಗಳನ್ನು ಪತ್ತೆಹಚ್ಚಲು ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.



