ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ದಿನಗೂಲಿ ಕಾರ್ಮಿಕ ಮೊಹಮ್ಮದ್ ಇರ್ಫಾನ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ನಡೆದ ಹಾಸ್ಯಮಯ ಸಂಭಾಷಣೆಯನ್ನು ಅವರು ಬಹಿರಂಗಪಡಿಸಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರಿಯಾಂಕಾ ಹೇಳಿದ್ದೇನು?
ಸಂದರ್ಶನದಲ್ಲಿ ಮಾತನಾಡಿದ ಇರ್ಫಾನ್, ರಾಹುಲ್ ಗಾಂಧಿ ತಮ್ಮ ಮನೆಗೆ ಭೇಟಿ ನೀಡುವ ಮೊದಲು ಪ್ರಿಯಾಂಕಾ ಗಾಂಧಿ ದೂರವಾಣಿ ಮೂಲಕ ಮಾತನಾಡಿದ್ದರು ಎಂದು ತಿಳಿಸಿದ್ದಾರೆ. ಈ ವೇಳೆ, “ನನ್ನ ಮಾತು ರಾಹುಲ್ ಕೇಳುವುದಿಲ್ಲ, ನೀವಾದರೂ ಅವರನ್ನು ಮದುವೆಯಾಗಲು ಒಪ್ಪಿಸಿ” ಎಂದು ಅವರು ತಮಾಷೆಯಾಗಿ ಹೇಳಿದ್ದಾಗಿ ಇರ್ಫಾನ್ ವಿವರಿಸಿದ್ದಾರೆ.
ಇದನ್ನೂ ಓದಿ:
ಇರ್ಫಾನ್ ನೀಡಿದ ಉತ್ತರ
ಪ್ರಿಯಾಂಕಾ ಅವರ ಮಾತಿಗೆ ಪ್ರತಿಕ್ರಿಯಿಸಿದ ಇರ್ಫಾನ್, “ರಾಹುಲ್ ಗಾಂಧಿ ಈಗಲೇ ಮದುವೆಯಾಗಬಾರದು ಎಂಬುದು ನನ್ನ ಅಭಿಪ್ರಾಯ” ಎಂದು ಹಾಸ್ಯದ ಧಾಟಿಯಲ್ಲೇ ಉತ್ತರಿಸಿದ್ದಾಗಿ ಹೇಳಿದ್ದಾರೆ. ಈ ಸಂಭಾಷಣೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ಬಳಿಕ ರಾಹುಲ್ ಭೇಟಿ
ಇರ್ಫಾನ್ ಅವರ ಸಂದರ್ಶನ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕೆಲವೇ ದಿನಗಳಲ್ಲಿ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದರು. ಈ ಭೇಟಿ ರಾಜಕೀಯ ವಲಯದಲ್ಲೂ ಸಾಕಷ್ಟು ಗಮನ ಸೆಳೆದಿದೆ.



