ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ನಲ್ಲಿ ಓಮ್ನಿ ಹಾಗೂಬೈಕ್ ಮುಖಾಮುಖಿ ಡಿಕ್ಕಿಯಾಗಿ ಹಸೆಮಣೆ ಏರಬೇಕಿದ್ದ ಜೋಡಿಯೊಂದು ದುರ್ಮರಣ ಹೊಂದಿದೆ.
ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಮತ್ತು ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ್ರ (25) ಮೃತ ದುರ್ದೈವಿಗಳು. ಆಗಸ್ಟ್ ತಿಂಗಳು ರೇಖಾ, ಬಸವನಗೌಡ ನಿಶ್ಚಿತಾರ್ಥವಾಗಿತ್ತು. ಮಳೆಯ ಕಾರಣಕ್ಕೆ ಮದುವೆಯನ್ನು ಮುಂದೂಡಿದ್ದ 2 ಕುಟುಂಬಸ್ಥರು, ಡಿಸೆಂಬರ್ನಲ್ಲಿ ಇಬ್ಬರ ಮದುವೆಗೆ ದಿನಾಂಕ ನಿಗದಿ ಮಾಡಿದ್ದರು. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓಮ್ನಿ-ಬೈಕ್ ಮುಖಾಮುಖಿ ಡಿಕ್ಕಿ: ಹಸೆಮಣೆ ಏರಬೇಕಿದ್ದ ಜೋಡಿ ಸಾವು
