September 19, 2026
Saturday, September 19, 2026
spot_img

ದಾವಣಗೆರೆಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಹೊಸದಿಗಂತ ವರದಿ ದಾವಣಗೆರೆ:

ಟಿಪ್ಪರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಗರದ ಬಂಬೂ ಬಜಾರ್ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

ಸರಸ್ವತಿ ನಗರದ ನಿವಾಸಿ ಮಂಜುನಾಥ್(55 ವರ್ಷ) ಮೃತ ಬೈಕ್ ಸವಾರ. ಎಪಿಎಂಸಿಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ಮಂಜುನಾಥ ಎಂದಿನಂತೆ ಬೆಳಗ್ಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಗಣೇಶ ದೇವಸ್ಥಾನ ಸಮೀಪ ಅಪಘಾತ ನಡೆದಿದೆ.

ಇದನ್ನೂ ಓದಿ:

ಸಿಮೆಂಟ್ ತುಂಬಿದ ಟ್ರಾಕ್ಟರ್ ಪಕ್ಕ ಹೋಗುತ್ತಿದ್ದಾಗ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಲಾರಿ ಚಕ್ರಕ್ಕೆ ಸಿಲುಕಿ ಮಂಜುನಾಥ್ ದೇಹ ನಜ್ಜುಗುಜ್ಜಾಗಿದೆ. ಬೈಕ್ ನ ಬಿಡಿಭಾಗಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !