July 28, 2026
Tuesday, July 28, 2026
spot_img

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು: ಕರಾವಳಿ-ಮಲೆನಾಡಿನ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಒಳನಾಡಿನಲ್ಲೂ ಮಳೆಯ ಸಾಧ್ಯತೆ

ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 40–50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದೆ.

ಇದನ್ನೂ ಓದಿ:

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ನಗರಬಸ್ತಿಕೇರಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 102 ಮಿ.ಮೀ. ಮಳೆಯಾಗಿದೆ. ಸುಳ್ಯ, ಕಾರ್ಕಳ, ಆಗುಂಬೆ, ಕಿಗ್ಗ, ಸಕಲೇಶಪುರ ಹಾಗೂ ವಿರಾಜಪೇಟೆ ಭಾಗಗಳಲ್ಲೂ ಉತ್ತಮ ಮಳೆಯಾಗಿದ್ದು, ಜಲಾಶಯಗಳ ಒಳಹರಿವು ಹೆಚ್ಚುವ ನಿರೀಕ್ಷೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !