ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಸೌಂದರ್ಯೀಕರಣ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಲ್ಲಿರುವ ವಸ್ತುಗಳನ್ನು ತೆರವುಗೊಳಿಸುವ ಕಾರ್ಯ ಜಾರಿಯಲ್ಲಿದೆ. ಇದೀಗ ಬೆಸ್ಕಾಂನ ಲ್ಲಾ ಟ್ರಾನ್ಸ್ಫಾರ್ಮರ್ ಹಾಗೂ ವಿದ್ಯುತ್ ಕಂಬಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಎಲ್ಲಾ ಫುಟ್ಪಾತ್ಗಳಲ್ಲಿ ಬೆಸ್ಕಾಂಗೆ ಸಂಬಂಧಿಸಿದ ಅಡೆತಡೆಗಳ ಸಮಗ್ರ ಪಟ್ಟಿ (ಇನ್ವೆಂಟರಿ) ಸಿದ್ಧಪಡಿಸಿ, ಅವುಗಳನ್ನು ತೆರವುಗೊಳಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಸ್ಕಾಂಗೆ ಸಂಬಂಧಿಸಿದ ಎಲ್ಲ ರೀತಿಯ ಅಡೆತಡೆಗಳನ್ನು ಈ ಅಭಿಯಾನದ ಅವಧಿಯಲ್ಲಿ ತೆರವುಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಇದೇ ವೇಳೆ ಫುಟ್ಪಾತ್ಗಳ ಮೇಲೆ ಇರುವ ಟ್ರಾನ್ಸ್ಫಾರ್ಮರ್ಗಳನ್ನು ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸಚಿವರು ಆದೇಶಿಸಿದರು. ಬೆಸ್ಕಾಂಗೆ ಸಂಬಂಧಿಸಿದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಲ್ಪಾವಧಿ ಹಾಗೂ ದೀರ್ಘಾವಧಿಯ ಯೋಜನೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.



