Tuesday, October 7, 2025

ಭಾರತ-ಪಾಕ್‌ ಪಂದ್ಯ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಮತ್ತು ಪಾಕಿಸ್ತಾನ ನಡುವೆ ಸೆ.14ರಂದು ನಡೆಯಲಿರುವ ಟಿ20 ಏಷ್ಯಾಕಪ್‌ ಪಂದ್ಯವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆಗೆ ತಿರಸ್ಕರಿಸಿದೆ.

2025ರ ಟಿ20 ಏಷ್ಯಾಕಪ್‌ ವೇಳಾಪಟ್ಟಿ ಪ್ರಕಟವಾದಾಗಿನಿಂದಲೂ ಭಾರತ – ಪಾಕ್‌ ನಡುವಿನ ಪಂದ್ಯಕ್ಕೆ ಭಾರೀ ವಿರೋಧ ಕೇಳಿಬರ್ತಿದೆ. ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿವೆ.

ಹೀಗಾಗಿ ಇಂಡೋ-ಪಾಕ್‌ ಪಂದ್ಯ ನಿಲ್ಲಿಸುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಅದೇ ರೀತಿ ಭಾರತ-ಪಾಕಿಸ್ತಾನ ನಡುವಿನ ಏಷ್ಯಾಕಪ್‌ ಪಂದ್ಯವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಆದ್ರೆ ಅರ್ಜಿಯನ್ನ ವಿಚಾರಣೆಗೆ ಪರಿಗಣಿಸೋದಕ್ಕೂ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

error: Content is protected !!