March 25, 2026
Wednesday, March 25, 2026
spot_img

ಶಾಸಕರಿಗೆ 50 ಕೋಟಿ ರೂ ಅನುದಾನಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇತ್ತೀಚೆಗೆ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ , ಇದೀಗ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಬೆಂಗಳೂರು ಶಾಸಕರ ಜೊತೆ ಸಭೆ ಮಾಡಿರುವ ಸಿಎಂ ಸಿದ್ದರಾಮಯ್ಯ, ರಸ್ತೆ ದುರಸ್ತಿ, ನೂತನ ರಸ್ತೆ ನಿರ್ಮಾಣಕ್ಕೆ ಅನುದಾನ ಬಳಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಮುಖವಾಗಿ ಅನುದಾನ ಹಂಚಿಕೆ ವಿಚಾರವಾಗಿ ಬೆಂಗಳೂರು ಭಾಗದ ಶಾಸಕರೊಂದಿಗೆ ಚರ್ಚೆ ಮಾಡಿದರು. ಈ ವೇಳೆ ಶಾಸಕರ ಕುಂದು ಕೊರತೆಯನ್ನ ಆಲಿಸಿದರು. ಈಗಾಗಲೇ ಮೂರು ಹಂತದಲ್ಲಿ ಸಭೆ ಮಾಡಿದ್ದು, ಶಾಸಕರು, ಪರಿಷತ್ ಸದಸ್ಯರ ಜೊತೆಗೂ ಸಿಎಂ ಮೀಟಿಂಗ್ ಮಾಡಿದರು.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜೊತೆ ಸುದೀರ್ಘ ಸಭೆ ನಡೆಸಿ, ಗ್ಯಾರಂಟಿ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಯ ಮಾಹಿತಿ ಪಡೆದು, ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಬೇಡಿಕೆಯನ್ನು ಆಲಿಸಿ, ಅಗತ್ಯ ಸಹಕಾರ ಹಾಗೂ ಅನುದಾನ ಒದಗಿಸುವುದಾಗಿ ತಿಳಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !