July 29, 2026
Wednesday, July 29, 2026
spot_img

ಕಾವೇರಿ ಜಲ ವಿವಾದ: ರಾಜ್ಯಾದ್ಯಂತ ಪ್ರತಿಭಟನೆ, ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿವಾದ ಕುರಿತು ಮುಂದಿನ ಕಾನೂನು ಹಾಗೂ ರಾಜಕೀಯ ಹೋರಾಟದ ಬಗ್ಗೆ ಮಾತನಾಡಲು ರಾಜ್ಯ ಸರ್ಕಾರ ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯಲು ನಿರ್ಧರಿಸಿದೆ.

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರವಾಗಿ ಕಾನೂನು ತಜ್ಞರ ತಂಡದೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕರ್ನಾಟಕವು 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು ನಿರ್ದೇಶನ ನೀಡಿದೆ. ಇದನ್ನು ವಿರೋಧಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ.

ಮಂಡ್ಯ, ಮೈಸೂರು, ಶ್ರೀರಂಗಪಟ್ಟಣಗಳಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಹೋರಾಟಗಾರ ನಂಜುಂಡೇಗೌಡ ಅವರ ನೇತೃತ್ವದಲ್ಲಿ ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ರೈತರು ಕಳೆದ ರಾತ್ರಿ ಮೇಣದಬತ್ತಿ ಮೆರವಣಿಗೆ ನಡೆಸಿ, ರಾಜ್ಯದಲ್ಲೇ ನೀರಿನ ಕೊರತೆ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಗ್ರಹಿಸಿದರು.

ಸಿಡಬ್ಲ್ಯುಆರ್‌ಸಿ ಆದೇಶವನ್ನು ಜಾರಿಗೊಳಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !