July 29, 2026
Wednesday, July 29, 2026
spot_img

ನಾಳೆ ಬ್ರಾಹ್ಮಿ ಮುಹೂರ್ತಕ್ಕೆ ಎದ್ದು ರೆಡಿಯಾಗಿ! ಯಾಕೆ ಅಂತೀರಾ? ಈ ಸ್ಟೋರಿ ಓದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಕಿಂಗ್ ಸ್ಟಾರ್ ಯಶ್ ಮತ್ತು ಬಾಲಿವುಡ್ ನಟ ರಣಬೀರ್ ಕಪೂರ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಟ್ರೈಲರ್ ಬಿಡುಗಡೆಗೆ ಚಿತ್ರತಂಡ ವಿಶೇಷ ಯೋಜನೆ ರೂಪಿಸಿದೆ.

ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವ ಹೊಂದಿರುವ ಬ್ರಾಹ್ಮಿ ಮುಹೂರ್ತವನ್ನು ಆಯ್ಕೆ ಮಾಡಿಕೊಂಡಿರುವ ನಿರ್ಮಾಪಕರು, ಜುಲೈ 30ರಂದು ಬೆಳಗ್ಗೆ 4:15ಕ್ಕೆ ಟ್ರೈಲರ್ ಅನಾವರಣಗೊಳಿಸಲು ನಿರ್ಧರಿಸಿದ್ದಾರೆ. ಈ ವಿಶೇಷ ಸಮಯದಲ್ಲಿ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚಿಸುವ ಉದ್ದೇಶ ಹೊಂದಿದ್ದಾರೆ.

ಮುಂದೂಡಿದ್ದ ಬಿಡುಗಡೆಗೆ ಹೊಸ ದಿನಾಂಕ

ಚಿತ್ರದ ಟ್ರೈಲರ್ ಅನ್ನು ಆರಂಭದಲ್ಲಿ ಜುಲೈ 24ರಂದು ಬಿಡುಗಡೆ ಮಾಡುವ ಯೋಜನೆ ಇತ್ತು. ಆದರೆ ದೇಶದಲ್ಲಿ ನಡೆದ ಕೆಲವು ಬೆಳವಣಿಗೆಗಳು ಹಾಗೂ ಇತರ ಕಾರಣಗಳಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಹೊಸ ದಿನಾಂಕ ನಿಗದಿಯಾಗಿದ್ದು, ಟ್ರೈಲರ್ ಅನಾವರಣಕ್ಕೆ ಚಿತ್ರತಂಡ ಅಂತಿಮ ಸಿದ್ಧತೆ ನಡೆಸುತ್ತಿದೆ.

ಇದನ್ನೂ ಓದಿ:

‘ಸ್ಪೈಡರ್ ಮ್ಯಾನ್’ ಪ್ರದರ್ಶನಕ್ಕೂ ಮುನ್ನ ಟ್ರೈಲರ್

ಚಿತ್ರದ ಪ್ರಚಾರವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ನಿರ್ಮಾಪಕರು ಹೊಸ ತಂತ್ರ ಅನುಸರಿಸಿದ್ದಾರೆ. ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿರುವ ‘ಸ್ಪೈಡರ್ ಮ್ಯಾನ್’ ಚಿತ್ರದ ಪ್ರದರ್ಶನಕ್ಕೂ ಮುನ್ನವೇ ‘ರಾಮಾಯಣ’ ಟ್ರೈಲರ್ ಅನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುತ್ತದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !