July 29, 2026
Wednesday, July 29, 2026
spot_img

ಮಂಗಳೂರಿನಲ್ಲಿ ಬರೋಬ್ಬರಿ 82 ಕೋಟಿ ರೂ. ಮೌಲ್ಯದ ಡ್ರಗ್ಸ್‌ ನಾಶ: ಮಾದಕ ವಸ್ತುಗಳ ವಿರುದ್ಧ ಮಾದರಿಯಾಗುತ್ತಿದೆ ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳಲ್ಲಿ ವಿವಿಧ ಎನ್‌ಡಿಪಿಎಸ್‌ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಸುಮಾರು 82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಬುಧವಾರ ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಸುಟ್ಟು ನಾಶಪಡಿಸಲಾಗಿದೆ.

ನ್ಯಾಯಾಲಯದ ಅನುಮತಿಯೊಂದಿಗೆ 59 ಪ್ರಕರಣಗಳಿಗೆ ಸಂಬಂಧಿಸಿದ ಸುಮಾರು 450 ಕೆಜಿ ಗಾಂಜಾ, 43.26 ಕೆಜಿ ಎಂಡಿಎಂಎ, 80 ಗ್ರಾಂ ಚರಸ್, 880 ಗ್ರಾಂ ಹೈಡ್ರೋ ವೀಡ್ ಗಾಂಜಾ, 1 ಕೆ.ಜಿ. 200 ಗ್ರಾಂ ಭಾಂಗ್ ವಸ್ತುಗಳನ್ನು ಡ್ರಗ್ ಡಿಸ್ಪೋಸಲ್ ಸಮಿತಿ ಸಮ್ಮುಖದಲ್ಲಿ ವಿಲೇವಾರಿ ಮಾಡಲಾಯಿತು. ನಾಶಪಡಿಸಲಾದ ಮಾದಕ ವಸ್ತುಗಳಲ್ಲಿ ಪ್ರಮುಖವಾಗಿ 2024ನೇ ಸಾಲಿನಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸುಮಾರು 75 ಕೋಟಿ ರೂ. ಮೌಲ್ಯದ 37 ಕೆಜಿ. ಎಂಡಿಎಂಎ, 2025ನೇ ಸಾಲಿನಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಅಂದಾಜು 4.47 ಕೋಟಿ ರೂ. ಮೌಲ್ಯದ ಸುಮಾರು 4 ಕೆ.ಜಿ. ಎಂಡಿಎಂಎ, ಕೊಣಾಜೆ ಪೊಲೀಸ್ ಠಾಣೆಯ ಸುಮಾರು 20 ಲಕ್ಷ ರೂ. ಮೌಲ್ಯದ 106 ಕೆ.ಜಿ. ಗಾಂಜಾ ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಯ ಸುಮಾರು 36 ಲಕ್ಷ ರೂ. ಮೌಲ್ಯದ 111 ಕೆ.ಜಿ. ಗಾಂಜಾ ಸೇರಿವೆ. ಇದರಲ್ಲಿ 2024ರಲ್ಲಿ ಮಂಗಳೂರು ಪೂರ್ವ ಠಾಣೆಯಲ್ಲಿ ಜಪ್ತಿಯಾಗಿದ್ದ ಸುಮಾರು 75 ಕೋಟಿ ರೂ. ಮೌಲ್ಯದ 37 ಕೆಜಿ ಎಂಡಿಎಂಎ ಮತ್ತು 2025ರಲ್ಲಿ ಮುಲ್ಕಿ ಠಾಣೆಯಲ್ಲಿ ವಶಪಡಿಸಿಕೊಂಡಿದ್ದ ಸುಮಾರು 4.47 ಕೋಟಿ ರೂ. ಮೌಲ್ಯದ 4 ಕೆಜಿ ಎಂಡಿಎಂಎ ಪ್ರಮುಖವಾಗಿವೆ.‌


2026ನೇ ಸಾಲಿನಲ್ಲಿ ಇದುವರೆಗೆ 87 ಎನ್.ಡಿ.ಪಿ.ಎಸ್. ಪ್ರಕರಣಗಳನ್ನು ದಾಖಲಿಸಿ 157 ಪೆಡ್ಲರ್ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ ರೂ.8,18,30,130 ಮೌಲ್ಯದ 148 ಕೆ.ಜಿ. 615 ಗ್ರಾಂ ಗಾಂಜಾ, 7 ಕೆ.ಜಿ 165 ಗ್ರಾಂ ಎಂ.ಡಿ.ಎಂ.ಎ., 1 ಕೆಜಿ 705 ಗ್ರಾಂ ಹೈಡ್ರೋ ವೀಡ್ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಅವಧಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ವ್ಯಕ್ತಿಗಳ ವಿರುದ್ಧ 356 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ:



2026ರಲ್ಲಿ ಇದುವರೆಗೆ ನಗರದಲ್ಲಿ 87 ಎನ್‌ಡಿಪಿಎಸ್‌ ಪ್ರಕರಣಗಳನ್ನು ದಾಖಲಿಸಿ 157 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ ₹8.18 ಕೋಟಿ ಮೌಲ್ಯದ 148.6 ಕೆಜಿ ಗಾಂಜಾ, 7.165 ಕೆಜಿ ಎಂಡಿಎಂಎ, 1.705 ಕೆಜಿ ಹೈಡ್ರೋ ವೀಡ್ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಅವಧಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ಮಂದಿಯ ವಿರುದ್ಧ 356 ಪ್ರಕರಣಗಳು ದಾಖಲಾಗಿವೆ.

ಮಾದಕ ವಸ್ತುಗಳ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಪೊಲೀಸ್ ಇಲಾಖೆಯ ಕ್ಯೂ.ಅರ್ ಕೋಡ್ ಮೂಲಕ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 112 / 9480802321 ಸಂಖ್ಯೆಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !