July 30, 2026
Thursday, July 30, 2026
spot_img

ಅಮಿತ್ ಶಾಗೆ ಖರ್ಗೆ ಖಡಕ್ ಎಚ್ಚರಿಕೆ: ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್‌ಗೆ ರಾಜ್ಯಸಭೆಯಲ್ಲಿ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ ಕುರಿತ ಚರ್ಚೆಯ ವೇಳೆ, ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯವನ್ನು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದರು.

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ

ಸಂಸತ್ತಿನತ್ತ ಶಾಂತಿಯುತ ಮೆರವಣಿಗೆ ನಡೆಸುತ್ತಿದ್ದ ಯುವಕರ ಮೇಲೆ ಪೊಲೀಸರು ಲಾಠಿಚಾರ್ಜ್, ಅಶ್ರುವಾಯು ಹಾಗೂ ಪೆಲೆಟ್ ಗನ್‌ಗಳನ್ನು ಬಳಸಿ ಹಲ್ಲೆ ನಡೆಸಿದ್ದಾರೆ. ಸಂಚಾರ ತಡೆಯಲು ರೈಲ್ವೆ ನಿಲ್ದಾಣ ಮತ್ತು ಇಂಟರ್ನೆಟ್ ಬಂದ್ ಮಾಡಲಾಗಿತ್ತು ಎಂದು ಖರ್ಗೆ ಕಳವಳ ವ್ಯಕ್ತಪಡಿಸಿದರು.

ಅಮಿತ್ ಶಾಗೆ ನೇರ ಎಚ್ಚರಿಕೆ

ದೇಶದ ವಿವಿಧ ಭಾಗಗಳಿಂದ ಬಂದಿದ್ದ ನೂರಾರು ವಿದ್ಯಾರ್ಥಿಗಳ ಕೈಕಾಲು ಮುರಿದಿದ್ದು, ಕಣ್ಣುಗಳಿಗೆ ತೀವ್ರ ಗಾಯಗಳಾಗಿವೆ. ಈ ಅಮಾನವೀಯ ಘಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಸಂಪೂರ್ಣ ಹೊಣೆ. ಅವರು ಎಷ್ಟೇ ದಿನ ಬಾಗಿಲ ಹಿಂದೆ ಅಡಗಿ ಕುಳಿತರೂ, ಒಂದು ದಿನ ಅವರನ್ನು ಎಳೆದು ತಂದು ಸಾರ್ವಜನಿಕರ ಮುಂದೆ ನಿಲ್ಲಿಸುವುದು ಖಚಿತ ಎಂದು ಖರ್ಗೆ ಖಡಕ್ ಎಚ್ಚರಿಕೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !