July 30, 2026
Thursday, July 30, 2026
spot_img

ಕೆಪಿಎಸ್‌ಸಿ ಭ್ರಷ್ಟಾಚಾರ, ನೇಮಕಾತಿ ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಆಕ್ರೋಶ

ಹೊಸದಿಗಂತ ವರದಿ ಚಿತ್ರದುರ್ಗ:

ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ನೇಮಕಾತಿ ಅಕ್ರಮಗಳು, ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಭ್ರಷ್ಟಾಚಾರ ಹಾಗೂ ಖಾಲಿ ಇರುವ ಲಕ್ಷಾಂತರ ಸರ್ಕಾರಿ ಹುದ್ದೆಗಳ ಭರ್ತಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯದಿಂದ ರಾಜ್ಯದ ಯುವಜನರ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಬಿಜೆಪಿ ಮುಖಂಡ ಬಿ.ಸಿ.ಹನುಮಂತೇಗೌಡ ದೂರಿದ್ದಾರೆ.

 ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಲವು ವರ್ಷಗಳಿಂದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳು ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಯಾವುದೇ ಶಾಶ್ವತ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಕಳೆದ ಹಲವು ವರ್ಷಗಳಿಂದ ಏPSಅ, ಈಆಂ ಸೇರಿದಂತೆ ವಿವಿಧ ನೇಮಕಾತಿ ಪ್ರಕ್ರಿಯೆಗಳಲ್ಲಿ ವ್ಯಾಪಕ ಅವ್ಯವಹಾರಗಳು ನಡೆಯುತ್ತಿವೆ. ಪರೀಕ್ಷೆಗಳಲ್ಲಿ ಹಣ ಪಡೆದು ಅನರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ವ್ಯವಸ್ಥೆ ರೂಪುಗೊಂಡಿದ್ದು, ಅರ್ಹ ಅಭ್ಯರ್ಥಿಗಳ ಭವಿಷ್ಯವನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ. ಈ ಮೂಲಕ ಸರ್ಕಾರಿ ನೇಮಕಾತಿ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವೇ ಕುಸಿಯುವಂತಾಗಿದೆ ಎಂದಿದ್ದಾರೆ.

ದೈಹಿಕ ಶಿಕ್ಷಣ, ಸಂಗೀತ, ಕನ್ನಡ, ವಿಜ್ಞಾನ, ಹಿಂದಿ ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರ ನೇಮಕಾತಿ ಹಾಗೂ ಉPSಖಿಖ ಸೇರಿದಂತೆ ಹಲವು ನೇಮಕಾತಿಗಳು ಕಳೆದ ೧೫ ರಿಂದ ೨೦ ವರ್ಷಗಳಿಂದ ನಡೆದಿಲ್ಲ. ಕಲ್ಯಾಣ ಕರ್ನಾಟಕ ಸೇರಿದಂತೆ ಅನೇಕ ಭಾಗಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಶಿಕ್ಷಣ ವ್ಯವಸ್ಥೆಯ ಮೇಲಿನ ಸರ್ಕಾರದ ಉದಾಸೀನತೆಯನ್ನು ತೋರಿಸುತ್ತದೆ. ಬಯೋಟೆಕ್ನಾಲಜಿ, ಚಿತ್ರಕಲೆ, ದೈಹಿಕ ಶಿಕ್ಷಣ, ಬಿ.ಕಾಂ., ಬಿ.ಎಡ್. ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಸಾವಿರಾರು ಅಭ್ಯರ್ಥಿಗಳು ವರ್ಷಗಳಿಂದ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಬಿಜೆಪಿ ಸದಾ ಅವರ ಹೋರಾಟದೊಂದಿಗೆ ನಿಂತಿದ್ದರೂ, ಸರ್ಕಾರ ಮಾತ್ರ ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ;

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು ೩೫ ಸಾವಿರ ಶಿಕ್ಷಕರ ಹುದ್ದೆಗಳು ಇನ್ನೂ ಖಾಲಿ ಇವೆ ಎಂಬುದನ್ನು ಕಾಂಗ್ರೆಸ್ ನಾಯಕರೇ ಈ ಹಿಂದೆ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೂ ಈವರೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸದಿರುವುದು ಸರ್ಕಾರದ ಇಚ್ಛಾಶಕ್ತಿಯ ಕೊರತೆಯನ್ನು ತೋರಿಸುತ್ತದೆ. ಇತ್ತೀಚಿನ ಏPSಅ ನೇಮಕಾತಿ ಪ್ರಕ್ರಿಯೆಗಳಲ್ಲೂ ಗಂಭೀರ ಅಕ್ರಮಗಳ ಆರೋಪಗಳು ಕೇಳಿಬರುತ್ತಿವೆ. ೪೦೦ ಹುದ್ದೆಗಳ ನೇಮಕಾತಿಯಲ್ಲಿ ಸುಮಾರು ೩೫೦ ಕೋಟಿ ಲಂಚದ ವಹಿವಾಟು ನಡೆದಿರಬಹುದೆಂಬ ಗಂಭೀರ ಆರೋಪ ಗಳು ಕೇಳಿಬರುತ್ತಿವೆ. ಈ ಹಣ ಯಾರಿಗೆ ತಲುಪಿದೆ ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !