July 30, 2026
Thursday, July 30, 2026
spot_img

ರಾಜ್ಯಸಭೆಯಲ್ಲೂ ‘ಪರೀಕ್ಷಾ ಅಕ್ರಮ ತಡೆ ವಿಧೇಯಕ’ ಪಾಸ್: ರಾಷ್ಟ್ರಪತಿ ಅಂಕಿತವೊಂದೇ ಬಾಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ಯಶಸ್ವಿಯಾಗಿ ಅಂಗೀಕಾರಗೊಂಡ ಮರುದಿನವೇ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ’ವು ರಾಜ್ಯಸಭೆಯಲ್ಲೂ ಅಂಗೀಕಾರಗೊಂಡಿದೆ. ವಿರೋಧ ಪಕ್ಷಗಳ ತೀವ್ರ ಗದ್ದಲ ಹಾಗೂ ಸಭಾತ್ಯಾಗದ ನಡುವೆಯೂ ಮೇಲ್ಮನೆಯಲ್ಲಿ ಈ ಪ್ರಮುಖ ವಿಧೇಯಕಕ್ಕೆ ಅನುಮೋದನೆ ದೊರೆತಿದ್ದು, ಈಗ ಅಂತಿಮ ಅಂಕಿತಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಗಳ ತಲುಪಲಿದೆ.

ಯುವಜನರ ಹಿತರಕ್ಷಣೆಗೆ ಸರ್ಕಾರದ ಬದ್ಧತೆ

ರಾಜ್ಯಸಭೆಯಲ್ಲಿ ವಿಧೇಯಕವನ್ನು ಮಂಡಿಸಿ ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು, “ಈ ಕಾಯ್ದೆಯು ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಯುವಜನರ ಹಿತಾಸಕ್ತಿಯನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರದ ಅತ್ಯುನ್ನತ ಬದ್ಧತೆಯನ್ನು ಎತ್ತಿಹಿಡಿಯುತ್ತದೆ” ಎಂದು ಸ್ಪಷ್ಟಪಡಿಸಿದರು. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದರು.

ಮೇಲ್ಮನೆಯಲ್ಲಿ ಸಚಿವರ ಮಾತು

ಲೋಕಸಭೆಯಲ್ಲಿ ಸುಮಾರು 10 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆದು ಕರಡು ಮಸೂದೆಗೆ ಒಪ್ಪಿಗೆ ಸಿಕ್ಕಿದೆ. ಇದೀಗ ಹಿರಿಯರು, ಜ್ಞಾನಿಗಳು ಹಾಗೂ ಅನುಭವಿ ಪರಿಣತರಿಂದ ಕೂಡಿದ ಮೇಲ್ಮನೆಗೆ ಈ ವಿಧೇಯಕ ತಲುಪಿದೆ ಎಂದು ತಿಳಿಸಿದ ಸಚಿವರು, ಕಠಿಣ ಕಾನೂನುಗಳ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಜಾಲಗಳಿಗೆ ಸಂಪೂರ್ಣ ತೆರೆ ಎಳೆಯಲಾಗುವುದು ಎಂಬ ಭರವಸೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !