July 31, 2026
Friday, July 31, 2026
spot_img

ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖವೇ ಚೆನ್ನಾಗಿ ಹೊಳೆಯುತ್ತಿದೆ: ಪ್ರಧಾನಿಯ ಸೆಲ್ಫಿ ವಿಡಿಯೋ ಕುರಿತು CJP ವ್ಯಂಗ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾರ್ವಜನಿಕ ಪರೀಕ್ಷೆಗಳಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಸಂಬಂಧಿಸಿದ ತಿದ್ದುಪಡಿ ಮಸೂದೆಗೆ ಸಂಸತ್ತಿನ ಉಭಯ ಸದನಗಳು ಅನುಮೋದನೆ ನೀಡಿದ ಬಳಿಕ ಪ್ರಧಾನಿ ಮೋದಿ ಇನ್ಸ್ಟಾಗ್ರಾಮ್‌ನಲ್ಲಿ ಸೆಲ್ಫಿ ವಿಡಿಯೋವೊಂದನ್ನು ಅಪ್‌ಲೋಡ್‌ ಮಾಡಿದ್ದಾರೆ. ಈ ವಿಡಿಯೋ ಬಗ್ಗೆ ಕಾಕ್‌ರೋಚ್ ಜನತಾ ಪಾರ್ಟಿ ವ್ಯಂಗ್ಯ ವ್ಯಕ್ತಪಡಿಸಿದೆ.

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮಾತನಾಡಿ, ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖವೇ ಹೆಚ್ಚು ಹೊಳೆಯುತ್ತಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಪ್ರಧಾನಿಯ ವಿಡಿಯೋದಲ್ಲೇನಿದೆ?

ಸ್ನೇಹಿತರೇ, ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಿಸಲು ನಾವು ಒಂದೊಂದೇ ಹೆಜ್ಜೆ ಇಡುತ್ತಿದ್ದೇವೆ. ವಿಶೇಷ ಕಾರ್ಯಪಡೆ ರಚನೆ, ತ್ವರಿತ ನ್ಯಾಯಾಲಯಗಳ ಸ್ಥಾಪನೆ, ರಾಜ್ಯಗಳ ಸಲಹೆಗಳನ್ನು ಪಡೆದು ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದೇವೆ.ಹಲವು ವರ್ಷಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆ ಕೇವಲ ಕೇಂದ್ರ ಸರ್ಕಾರಕ್ಕಷ್ಟೇ ಅಲ್ಲ, ಅನೇಕ ರಾಜ್ಯಗಳಿಗೂ ದೊಡ್ಡ ಸವಾಲಾಗಿತ್ತು. ಈ ಸಮಸ್ಯೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ಅಗತ್ಯವಾಗಿತ್ತು. ಸಂಸತ್ತಿನಲ್ಲಿ ಬಲಿಷ್ಠ ಪೇಪರ್ ಲೀಕ್ ವಿರೋಧಿ ಮಸೂದೆಯನ್ನು ತರಲಾಗುವುದು ಎಂದು ನೀಡಿದ್ದ ಭರವಸೆಯನ್ನು ಸರ್ಕಾರ ಈಗ ಈಡೇರಿಸಿದೆ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !