September 16, 2026
Wednesday, September 16, 2026
spot_img

ಪ್ರತಿಭಟನೆ ವೇಳೆ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌: ಮೆಟಾ ಭಾರತದ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಕ್ಷ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಪೋಸ್ಟ್ ಮಾಡಿದ್ದಕ್ಕಾಗಿ ಮೆಟಾ ಇಂಡಿಯಾ ಮುಖ್ಯಸ್ಥರು ಸೇರಿದಂತೆ ಹಲವಾರು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರತಿಭಟನೆ ನಡೆಯುವಾಗ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮೋದಿಯವರ ಮಾರ್ಫ್ ಮಾಡಿದ ಮತ್ತು ಆಕ್ಷೇಪಾರ್ಹ AI ವಿಡಿಯೋಗಳು, ಫೋಟೋಗಳನ್ನು ಹಂಚಿಕೊಳ್ಳಲಾಗಿತ್ತು. ಇದರಲ್ಲಿ ಆಕ್ರಮಣಕಾರಿ ಭಾಷೆ, ಅಪಹಾಸ್ಯ ಮತ್ತು ಅಸಭ್ಯ ಹೇಳಿಕೆಗಳನ್ನು ಬಳಸಲಾಗಿದೆ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿ, ಆಕ್ರಮಣಕಾರಿ ವರ್ತನೆಗೆ ಪ್ರೋತ್ಸಾಹ ಸಿಕ್ಕಂತಾಗುತ್ತದೆ. ಇದು ಸಮಾಜದಲ್ಲಿ ಅಶಾಂತಿಗೆ ಕಾರಣ ಆಗಲಿದೆ ಎಂದು ಆರೋಪಿಸಿ ಉದ್ಯಮಿ ಎಸ್ ಅರವಿಂದ್ ರೆಡ್ಡಿ ಮತ್ತು ತೆಲಂಗಾಣ ಬಿಜೆಪಿ ಕಾರ್ಯಕರ್ತ ಟಿ ಸಾಯಿಕಿರಣ್ ಗೌಡ ದೂರು ನೀಡಿದ್ದರು.

ಈ ಸಂಬಂಧ ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಮೆಟಾದ ಭಾರತದ ಮುಖ್ಯಸ್ಥರಾದ ಅರುಣ್ ಶ್ರೀನಿವಾಸ್ ಮತ್ತು ಹಲವಾರು ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಅಶ್ಲೀಲತೆ ಮತ್ತು ನಿಂದನೆಗೆ ಸಂಬಂಧಿಸಿದ ಅನೇಕ ಪೋಸ್ಟ್‌ಗಳು, ಕಾಮೆಂಟ್‌ಗಳನ್ನು ಪರಿಶೀಲಿಸಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !