July 31, 2026
Friday, July 31, 2026
spot_img

ಒಂದೇ ದಿನದಲ್ಲಿ ಮೈದುಂಬಿದ ಭೀಮಾ ನದಿ: ಪ್ರವಾಹ ಭೀತಿ ನಡುವೆ ರೈತರಿಗೆ ನೆಮ್ಮದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಭೀಮಾ ನದಿಯಲ್ಲಿ ನೀರಿನ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಕೆಲವೇ ದಿನಗಳ ಹಿಂದೆ ನೀರಿನ ಕೊರತೆಯಿಂದ ಬಳಲುತ್ತಿದ್ದ ನದಿ ಈಗ ತುಂಬಿ ಹರಿಯುತ್ತಿದ್ದು, ಒಂದೆಡೆ ಪ್ರವಾಹ ಭೀತಿ ಎದುರಾದರೆ, ಮತ್ತೊಂದೆಡೆ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುಸಣಗಿ ಬ್ಯಾರೇಜ್‌ನಿಂದ ಸುಮಾರು 50 ಸಾವಿರ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ನದಿಯ ನೀರಿನ ಮಟ್ಟ ವೇಗವಾಗಿ ಏರಿಕೆಯಾಗಿದ್ದು, ತೀರ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ಇದನ್ನೂ ಓದಿ:

ರೈತರಲ್ಲಿ ಸಂತಸ, ಆಡಳಿತದ ಎಚ್ಚರಿಕೆ

ಭೀಮಾ ನದಿಯಲ್ಲಿ ನೀರಿನ ಹರಿವು ಹೆಚ್ಚಿರುವುದು ಕೃಷಿಗೆ ಆಶಾದಾಯಕ ಬೆಳವಣಿಗೆಯಾಗಿದೆ. ನೀರಿನ ಕೊರತೆಯಿಂದ ಸಂಕಷ್ಟದಲ್ಲಿದ್ದ ರೈತರಿಗೆ ಈ ಮಳೆ ಹಾಗೂ ನದಿಯ ಹರಿವು ವರದಾನವಾಗಿದ್ದು, ಮುಂಬರುವ ಬೆಳೆಗಳಿಗೆ ಅನುಕೂಲವಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !