September 23, 2026
Wednesday, September 23, 2026
spot_img

ನಾಳೆ ಮೈಸೂರಿಗೆ ಪ್ರಧಾನಿ ಮೋದಿ: ‘ವಿವೇಕ ಸ್ಮಾರಕ’ ಲೋಕಾರ್ಪಣೆ, ನಗರದಲ್ಲಿ ಬಿಗಿ ಭದ್ರತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 1ರಂದು ಮೈಸೂರಿಗೆ ಭೇಟಿ ನೀಡಿ ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ನಿರ್ಮಿಸಲಾದ ‘ವಿವೇಕ ಸ್ಮಾರಕ’ವನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದ್ದು, ಹಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಪ್ರಧಾನಿ ಮೋದಿ ಮಧ್ಯಾಹ್ನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ‘ವಿವೇಕ ಸ್ಮಾರಕ’ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಬಳಿಕ ಸಂಜೆ ದೆಹಲಿಗೆ ಮರಳಲಿದ್ದಾರೆ.

ಇದನ್ನೂ ಓದಿ:

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದ ಪ್ರಮುಖ ಮಾರ್ಗಗಳಲ್ಲಿ ಬ್ಯಾರಿಕೇಡ್‌ ಅಳವಡಿಕೆ, ಪೊಲೀಸ್ ಬಂದೋಬಸ್ತ್‌, ಶ್ವಾನದಳದಿಂದ ತಪಾಸಣೆ ಸೇರಿದಂತೆ ಕಟ್ಟುನಿಟ್ಟಿನ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಪರ್ಯಾಯ ಸಂಚಾರ ಮಾರ್ಗಗಳನ್ನು ಸೂಚಿಸಲಾಗಿದ್ದು, ವಾಹನ ಸವಾರರು ಟ್ರಾಫಿಕ್‌ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !