ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕ್ಕಳ ಹಾಗೂ ಯುವಕರಲ್ಲಿ ಹೆಚ್ಚುತ್ತಿರುವ ಅನಾರೋಗ್ಯಕರ ಆಹಾರ ಸೇವನೆಗೆ ಕಡಿವಾಣ ಹಾಕುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ಫುಡ್ ಮಾರಾಟವನ್ನು ನಿಷೇಧಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲೇ ಈ ಸಂಬಂಧದ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುತ್ತಿದೆ.
ಶಾಲಾ ಕ್ಯಾಂಟೀನ್ಗಳ ಮೇಲೂ ಕಟ್ಟುನಿಟ್ಟಿನ ನಿಗಾ
ಇತ್ತೀಚಿನ ಪರಿಶೀಲನೆಯಲ್ಲಿ ಕೆಲವು ಶಿಕ್ಷಣ ಸಂಸ್ಥೆಗಳ ಕ್ಯಾಂಟೀನ್ಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಕೊಬ್ಬು ಮತ್ತು ಅನಾರೋಗ್ಯಕರ ಆಹಾರಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರದ ನಿಯಮ ಉಲ್ಲಂಘಿಸಿ ಜಂಕ್ಫುಡ್ ಮಾರಾಟ ಮುಂದುವರಿಸಿದರೆ ಸಂಬಂಧಪಟ್ಟ ಸಂಸ್ಥೆಗಳು ಹಾಗೂ ವ್ಯಾಪಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:
ಹೋಟೆಲ್ಗಳಲ್ಲಿ ಬಿಸಿನೀರು ಕಡ್ಡಾಯ
ಜಂಕ್ಫುಡ್ ನಿಯಂತ್ರಣದ ಜೊತೆಗೆ ಸಾರ್ವಜನಿಕ ಆರೋಗ್ಯಕ್ಕೂ ಆದ್ಯತೆ ನೀಡಿರುವ ಸರ್ಕಾರ, ರಾಜ್ಯದ ಹೋಟೆಲ್, ರೆಸ್ಟೋರೆಂಟ್ ಹಾಗೂ ಕ್ಯಾಂಟೀನ್ಗಳಲ್ಲಿ ಗ್ರಾಹಕರಿಗೆ ಕಡ್ಡಾಯವಾಗಿ ಬಿಸಿನೀರು ಒದಗಿಸುವಂತೆ ಸೂಚಿಸಿದೆ. ಶೀಘ್ರದಲ್ಲೇ ಯಾವ ಆಹಾರ ಪದಾರ್ಥಗಳಿಗೆ ಅನುಮತಿ ಹಾಗೂ ಯಾವುದಕ್ಕೆ ನಿಷೇಧ ಎಂಬ ಕುರಿತು ಸ್ಪಷ್ಟ ಮಾರ್ಗಸೂಚಿ ಪ್ರಕಟವಾಗಲಿದೆ.



