ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿಮಾ ಕ್ಷೇತ್ರದಲ್ಲಿ ಎರಡು ದಶಕಗಳ ಪಯಣ ಪೂರ್ಣಗೊಳಿಸಿರುವ ಕಂಗನಾ ಹಲವು ಯಶಸ್ವಿ ಚಿತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ರಾಜಕೀಯದಲ್ಲೂ ಸಕ್ರಿಯರಾಗಿರುವ ಅವರು, ಸಾಮಾಜಿಕ ಹಾಗೂ ಸಾರ್ವಜನಿಕ ವಿಚಾರಗಳ ಕುರಿತು ಆಗಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚಿನ ಹೇಳಿಕೆಗಳು ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಟೀಕೆಗಳಿಗೆ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ:
ಸಿನಿಮಾಗಳಲ್ಲಿ ನಿರ್ವಹಿಸಿದ ಪಾತ್ರಗಳನ್ನು ಆಧರಿಸಿ ತಮ್ಮ ವೈಯಕ್ತಿಕ ನಿಲುವುಗಳನ್ನು ಅಳೆಯುವುದು ಸರಿಯಲ್ಲ ಎಂದು ಹೇಳಿರುವ ಅವರು, ಸಿನಿಮಾ ಮತ್ತು ನೈಜ ಜೀವನದ ನಡುವಿನ ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.
ಯುವಕರ ವರ್ತನೆ ಬಗ್ಗೆ ಅಸಮಾಧಾನ
ಇತ್ತೀಚಿನ ಕೆಲವು ಪ್ರತಿಭಟನೆಗಳಲ್ಲಿ ಯುವಕರು ಬಳಸಿದ ಭಾಷೆ ಮತ್ತು ವರ್ತನೆ ಬಗ್ಗೆ ಕಂಗನಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದ್ದರೂ, ಅದನ್ನು ಸಂಸ್ಕಾರಯುತವಾಗಿ ವ್ಯಕ್ತಪಡಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ವಿದ್ಯಾರ್ಥಿ ಜೀವನದಲ್ಲಿಯೂ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ಅನುಭವವನ್ನು ನೆನಪಿಸಿಕೊಂಡ ಅವರು, ಇಂದಿನ ಪ್ರತಿಭಟನೆಗಳ ಶೈಲಿ ಆತಂಕ ಹುಟ್ಟಿಸುತ್ತದೆ ಎಂದಿದ್ದಾರೆ.



