August 1, 2026
Saturday, August 1, 2026
spot_img

ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತ: ಸೋಮವಾರ ಹೊಸ ಸಚಿವರ ಪ್ರಮಾಣವಚನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಕ್ಕಿದೆ. ದೆಹಲಿಯ ಕಾಂಗ್ರೆಸ್ ವರಿಷ್ಠರು ನೂತನ ಸಚಿವರ ಸೇರ್ಪಡೆಗೆ ಅಂತಿಮ ಅನುಮೋದನೆ ನೀಡಿದ್ದು, ಸಂಪುಟ ಸೇರಲಿರುವ ನಾಯಕರ ದಿನಗಣನೆ ಆರಂಭವಾಗಿದೆ.

ಸೋಮವಾರ ಸಂಜೆ ಕಾರ್ಯಕ್ರಮ

ವರಿಷ್ಠರ ಹಸಿರು ನಿಶಾನೆ ಸಿಗುತ್ತಿದ್ದಂತೆ, ಸೋಮವಾರ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸಮಾರಂಭವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ರಾಜಭವನದಲ್ಲಿ ಅಗತ್ಯ ಸಿದ್ಧತೆಗಳನ್ನು ತಕ್ಷಣವೇ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಪಟ್ಟಿ ರವಾನೆ ಮತ್ತು ನಾಯಕರ ನಿರೀಕ್ಷೆ

ಭಾನುವಾರ (ಆಗಸ್ಟ್ 2) ನೂತನ ಸಚಿವರ ಅಧಿಕೃತ ಪಟ್ಟಿಯು ಸಿಎಂ ಕೈಸೇರಲಿದೆ. ಮೂಲಗಳ ಪ್ರಕಾರ, ಈ ಬಾರಿ ಸುಮಾರು 18ಕ್ಕೂ ಹೆಚ್ಚು ಶಾಸಕರಿಗೆ ಸಂಪುಟದಲ್ಲಿ ಹೊಸದಾಗಿ ಸ್ಥಾನ ಸಿಗುವ ಸಾಧ್ಯತೆಯಿದೆ. ಪ್ರಭಾವಿ ನಾಯಕರು ಹಾಗೂ ಯುವ ಮುಖಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಸಚಿವ ಗಾದಿ ಯಾರಿಗೆ ಸಿಗಲಿದೆ ಎಂಬ ಕುತೂಹಲ ತುದಿಯಲ್ಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !